ಉಡುಪಿ: ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪಂಜಿನ ಮೆರವಣಿಗೆ, ಪ್ರತಿಭಟನೆ
ಉಡುಪಿ: ದಲಿತ ಸಂಘರ್ಷ ಐಕ್ಯಾತ ಸಮಿತಿ, ಉಡುಪಿ ಮತ್ತು ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಇಂದು ಉಡುಪಿಯ ಬೋರ್ಡ್ ಹೈಸ್ಕೂಲ್ ಬಳಿ ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಆತನನ್ನು ಬಂಧಿಸಲು ಆಗ್ರಹಿಸಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಜರುಗಿತು.
ಹಿರಿಯ ಚಿಂತಕ ಪ್ರೊ.ಫಣಿರಾಜ್ ಮಾತನಾಡಿ, ಬಿಜೆಪಿ ಸರಕಾರದ ಪಾಪದ ಕೊಡ ತುಂಬಿದೆ. ಅಲ್ಲದೆ ಯುಮುನಾ, ಗಂಗೆ ಎಲ್ಲವೂ ಪಾಪದಿಂದ ತುಂಬಿ ಹೋಗಿದೆ. ನದಿ ನೀರನ್ನು ಕಲುಷಿತಗೊಳಿಸಿದ ಹಾಗೆ ಜನರ ಮನಸ್ಸನ್ನು ಕಲುಷಿತಗೊಳಿಸಲಾಗುತ್ತಿದೆ ಎಂದು ದೂರಿದರು.
ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾದ ಕೂಡಲೇ ಆರೋಪಿಯನ್ನು ಬಂಧಿಸಬೇಕಿತ್ತು. ಆದರೆ ಕೇಂದ್ರ ಸರ್ಕಾರ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.
ಇದ್ರಿಸ್ ಹೂಡೆ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಂಜುನಾಥ್ ಗಿಳಿಯಾರ್, ಹರೀಶ್ ಸಾಲಿಯಾನ್, ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್ ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw