ಜ್ಞಾನವಾಪಿ ಕೇಸ್: ಮಸೀದಿ ಸಮಿತಿಯ ಅರ್ಜಿ ವಜಾ
ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಮಸೀದಿಯ ಆಡಳಿತ ಸಮಿತಿಗೆ ಹಿನ್ನಡೆಯಾಗಿದೆ. ಸ್ಥಳೀಯ ಕೋರ್ಟ್ ನಲ್ಲಿ ನಡೆಯುತ್ತಿರುವ ಸಿವಿಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪ್ರಾರ್ಥನೆ ಮಾಡುವ ಹಕ್ಕನ್ನು ಕೋರಿ ವಾರಣಾಸಿ ನ್ಯಾಯಾಲಯದಲ್ಲಿ ರಾಖಿ ಸಿಂಗ್ ಮತ್ತು ಐವರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಇತರರು ಸಿವಿಲ್ ದಾವೆ ಹೂಡಿದ್ದರು. ಅವರು ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ್ ಗೌರಿಯ ನಿಯಮಿತ ಪೂಜೆಯನ್ನು ಬಯಸಿದ್ದರು. ಇದೀಗ ಹಿಂದೂ ಮಹಿಳಾ ಆರಾಧಕರ ಗುಂಪು ಸಲ್ಲಿಸಿದ ಮೊಕದ್ದಮೆ ಮಾನ್ಯವಾಗಿದೆ. ಹೀಗಾಗಿ ನ್ಯಾಯಾಲಯವು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದುವರಿಸಲು ಅವಕಾಶ ಮಾಡಿಕೊಟ್ಟಿದೆ.
ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಮತ್ತು ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ 1991ರ ಪೂಜಾ ಸ್ಥಳಗಳ ಕಾಯಿದೆ ಮತ್ತು 1995ರ ಕೇಂದ್ರ ವಕ್ಫ್ ಕಾಯಿದೆಯಡಿ ಇದನ್ನು ನಿರ್ವಹಿಸಲಾಗುವುದಿಲ್ಲ ಎಂದು ವಾದಿಸಿ, ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಾರಣಾಸಿಯ ಜಿಲ್ಲಾ ನ್ಯಾಯಾಧೀಶರ ತೀರ್ಪಿನ ವಿರುದ್ಧ ಸಲ್ಲಿಸಿದ ಮೇಲ್ಮನವಿ ಇದಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZA