ಮಂಗಳೂರಿನ ಸಮುದ್ರ ತೀರದಲ್ಲಿ ಅನೈತಿಕ ಪೊಲೀಸ್ ಗಿರಿಯ ಅಟ್ಟಹಾಸ!: ದಮ್ಮು, ತಾಕತ್ತು ಪ್ರದರ್ಶಿಸುತ್ತಾ ಕಾಂಗ್ರೆಸ್ ಸರ್ಕಾರ? - Mahanayaka

ಮಂಗಳೂರಿನ ಸಮುದ್ರ ತೀರದಲ್ಲಿ ಅನೈತಿಕ ಪೊಲೀಸ್ ಗಿರಿಯ ಅಟ್ಟಹಾಸ!: ದಮ್ಮು, ತಾಕತ್ತು ಪ್ರದರ್ಶಿಸುತ್ತಾ ಕಾಂಗ್ರೆಸ್ ಸರ್ಕಾರ?

someshwar
02/06/2023

ಸಮುದ್ರ ವಿಹಾರಕ್ಕೆಂದು ಹೋಗಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.


Provided by

ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವಿಹಾರಕ್ಕೆಂದು‌ ಸೋಮೇಶ್ವರ ಕಡಲ ತೀರಕ್ಕೆ ಹೋಗಿದ್ದರು. ಮೂವರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು 2 ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


Provided by

ಇನ್ನೂ ರಾಜ್ಯದಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ಮಟ್ಟ ಹಾಕ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದ್ದರೂ, ಇನ್ನೊಂದೆಡೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಅನೈತಿಕ ಪೊಲೀಸ್ ಗಿರಿಯನ್ನು ಮಟ್ಟ ಹಾಕಲು ಕಾಂಗ್ರೆಸ್ ಧಮ್ಮು, ತಾಕತ್ತು ಪ್ರದರ್ಶಿಸುತ್ತಾ? ಅನ್ನೋ ಪ್ರಶ್ನೆಗಳು ಕರಾವಳಿಯಾದ್ಯಂತ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ