ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನಾಕಾರಿ ಸ್ಟೇಟಸ್: ಆರೆಸ್ಸೆಸ್ ಕಾರ್ಯಕರ್ತ ಅರೆಸ್ಟ್
ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನಾಕಾರಿಯಾಗಿ ಸ್ಟೇಟಸ್ ಹಾಕಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಮುಸ್ಲಿಮ್ ಹೆಣ್ಣು ಮಕ್ಕಳು, ಮಕ್ಕಳನ್ನು ಹೆರುವ ಯಂತ್ರ ಎಂಬಂತೆ ಅವಹೇಳನಾಕಾರಿಯಾಗಿ ಆರೆಸ್ಸೆಸ್ ಕಾರ್ಯಕರ್ತರ ರಾಜು ವಾಟ್ಸಾಪ್ ಸ್ಟೇಟಸ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಎನ್ನಲಾಗಿದೆ.
ಈ ಸ್ಟೇಟಸ್ ವೈರಲ್ ಆಗುತ್ತಿದ್ದಂತೆಯೇ ಆಕ್ರೋಶಗೊಂಡ ಮುಸ್ಲಿಮ್ ಸಮುದಾಯ ಲಿಂಗಸುಗೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ರಾಜು ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ರಾಜುನನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw