ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ ಕಿಡಿ
2014 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕೂಡ ರಾಹುಲ್ ಆರೋಪಿಸಿದ್ದಾರೆ.
ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿ, ‘ದೇಶದ ಸರ್ಕಾರವನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಕೆಲಸ ಮಾಡುತ್ತಿದೆ. ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶುಭವೇ ಆಗುತ್ತದೆ ಎಂಬ ನಂಬಿಕೆ ನನಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರತಿಪಕ್ಷಗಳು ಸಮರ್ಪಕವಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಕೈ ಜೋಡಿಸಿದರೆ ಆಡಳಿತಾರೂಢ ಬಿಜೆಪಿಯನ್ನು ಸುಲಭವಾಗಿ ಸೋಲಿಸಬಹುದು. ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ. ಇದೆಲ್ಲವನ್ನೂ ಮೀರಿ 2014 ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw