ಮನೆಯೊಡತಿ ಹೆಸರಲ್ಲಿ ಗಂಡಸರ ಬ್ಯಾಂಕ್ ಖಾತೆ ಕೊಟ್ಟರೆ ಆ ಅರ್ಜಿ ಊರ್ಜಿತವಾಗುವುದಿಲ್ಲ: ಡಿ.ಕೆ.ಶಿವಕುಮಾರ್

ದೇಶ ಹಾಗೂ ರಾಜ್ಯದ ಇತಿಹಾಸದಲ್ಲಿ ಒಂದೇ ದಿನ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನ ನಿನ್ನೆ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ನವರ ದುಃಖ, ದುಗುಡ ಹೆಚ್ಚಾಗಿದ್ದು, ರಾಜ್ಯದ ಜನ ನೋಡುತ್ತಿದ್ದಾರೆ. ನೀವೆಲ್ಲರೂ ನಿಮ್ಮ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಈ ಯೋಜನೆ ಲಾಭ ಸಿಗುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕನಕಪುರಕ್ಷೇತ್ರದ ಕಲ್ಲಹಳ್ಳಿ, ಶಿವನಹಳ್ಳಿ, ಹಾರೋಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಆನ್ ಲೈನ್ ಹಾಗೂ ಆಫ್ ಲೈನ್ ಅರ್ಜಿ ಕರೆಯಲಾಗುವುದು. ನೀವು ಮನೆ ಮನೆಗೆ ಹೋಗಿ ಅವರ ಮಾಹಿತಿ, ದಾಖಲೆ ಸಂಗ್ರಹಿಸಿ ಅರ್ಜಿ ತುಂಬಿ ಅವರಿಗೆ ಈ ಯೋಜನೆ ಸಿಗುವಂತೆ ಮಾಡಬೇಕು ಎಂದರು.
ಮನೆಯೊಡತಿ ಯಾರು ಎಂದು ಕುಟುಂಬದವರೇ ತೀರ್ಮಾನ ಮಾಡಬೇಕು. ಒಂದು ವೇಳೆ ಮನೆಯೊಡತಿ ಹೆಸರಲ್ಲಿ ಗಂಡಸರ ಬ್ಯಾಂಕ್ ಖಾತೆ ಕೊಟ್ಟರೆ ಆ ಅರ್ಜಿ ಊರ್ಜಿತವಾಗುವುದಿಲ್ಲ. ಹೀಗಾಗಿ ಮಹಿಳೆಯರ ಬ್ಯಾಂಕ್ ಖಾತೆಯನ್ನೇ ಪಡೆಯಿರಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಜೂನ್ 11ರಿಂದ ಶಕ್ತಿ ಯೋಜನೆ ಜಾರಿಯಾಗಲಿದ್ದು, ಮಹಿಳೆಯರಿಗೆ ಉಚಿತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದ್ರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw