ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ - Mahanayaka
3:52 PM Thursday 12 - December 2024

ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

03/06/2023

ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್‌ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು.

ಕಟಕ್‌ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಮುಂದುವರಿದು, ‘ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಯಾವುದೇ ರೀತಿಯ ಕೊರತೆಯಾಗಲು ಬಿಡುವುದಿಲ್ಲ. ಇದು ಗಂಭೀರ ಘಟನೆ. ಪ್ರತಿ ಕೋನದಿಂದ ತನಿಖೆ ನಡೆಸಲು ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಸರ್ಕಾರ ರೈಲ್ವೇ ಹಳಿ ಮರುಸ್ಥಾಪನೆಗಾಗಿ ಕೆಲಸ ಮಾಡುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ. ಅಪಘಾತದಿಂದ ಸಂತ್ರಸ್ತರಾದ ಎಲ್ಲರಿಗೂ ಸರ್ಕಾರವು ಎಲ್ಲಾ ಅಗತ್ಯತೆಗಳಲ್ಲಿ ಸಹಾಯ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ