ಅಂಬೇಡ್ಕರ್ ಜಯಂತಿ ಆಚರಿಸಿದ್ದಕ್ಕೆ ಯುವಕನ ಕೊಲೆ: 7 ಮಂದಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು - Mahanayaka
11:57 AM Thursday 12 - December 2024

ಅಂಬೇಡ್ಕರ್ ಜಯಂತಿ ಆಚರಿಸಿದ್ದಕ್ಕೆ ಯುವಕನ ಕೊಲೆ: 7 ಮಂದಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

04/06/2023

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಿಸಿದ್ದಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ಯೆಯಾದ ಯುವಕನನ್ನು ಅಕ್ಷಯ್ ಭಲೇರಾವ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಆರೋಪಿಗಳು ಮೇಲ್ಜಾತಿ ಸಮುದಾಯದ ವ್ಯಕ್ತಿಯೊಬ್ಬರ ವಿವಾಹವನ್ನು ಆಚರಿಸುತ್ತಿದ್ದಾಗ ಅಕ್ಷಯ್ ಭಲೇರಾವ್ ಹೋಗುತ್ತಿದ್ದ. ಈ ವೇಳೆ, ಭಲೇರಾವ್ ಮತ್ತು ಈತನ ಸಹೋದರ ಆಕಾಶ್ ನೋಡಿದ ಆರೋಪಿಗಳು, ಅಂಬೇಡ್ಕರ್ ಜಯಂತಿ ಆಚರಿಸಿದ ಇಬ್ಬರಲ್ಲಿ ಒಬ್ಬನನ್ನು ಆಚರಿಸಿದ್ದಕ್ಕೆ ಕೊಲ್ಲಬೇಕು ಎಂಬ ನಿರ್ಧಾರ ಮಾಡಿದ್ದರಂತೆ.

ಇದೇ ವಿಚಾರದಲ್ಲಿ ಆರೋಪಿಗಳು ಮತ್ತು ಅಕ್ಷಯ್, ಆಕಾಶ್ ನಡುವೆ ಮಾತಿನ ಚಕಮಕಿ ಆರಂಭಗೊಂಡು ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಅಕ್ಷಯ್ ಭಲೇರಾವ್​ನಿಗೆ ಥಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಆಕಾಶ್​ ಮೇಲೂ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದರು.

ಈ ಪ್ರಕರಣದ ಕುರಿತು ಭಾರತೀಯ ದಂಡ ಸಂಹಿತೆಯಡಿ ಕೊಲೆ, ಕೊಲೆ ಯತ್ನ, ಗಲಭೆ ಮತ್ತು ಹಲ್ಲೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ