ರೈಲು ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸಾಗಿಸುತ್ತಿದ್ದ ಬಸ್ ಅಪಘಾತ
ಒಡಿಶಾದ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೊದಲೇ ಗಾಯಗೊಂಡಿದ್ದ ಪ್ರಯಾಣಿಕರು ಮತ್ತೊಮ್ಮೆ ಗಾಯಗೊಂಡಿದ್ದಾರೆ.
ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ಪಶ್ಚಿಮ ಬಂಗಾಳದ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿತ್ತು. ಈ ರೀತಿಯಾಗಿ ಗಾಯಾಳುಗಳನ್ನು ಸಾಗಿಸುತ್ತಿದ್ದ ಒಂದು ಬಸ್ ಗೆ ಮಾರ್ಗ ಮಧ್ಯೆ ಮೇದಿನಿಪುರ ಬಳಿ ಪಿಕಪ್ ವ್ಯಾನ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಾವು ನೋವುಗಳಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಬಸ್ಸಿನಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದವರು ಹಾಗೂ ಗಂಭೀರ ಗಾಯಗೊಂಡಿದ್ದ ಗಾಯಾಳುಗಳು ಕೂಡ ಇದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಣ್ಣಪುಟ್ಟ ಗಾಯಗೊಂಡವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ಸಂಜೆ ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲು, ಶಾಲಿಮಾರ್ ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಈ ಅಫಘಾತ ಸಂಭವಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw