ಕಾಂಗ್ರೆಸ್ ಶಾಸಕನ ಅಭಿನಂದನಾ ಸಮಾರಂಭದಲ್ಲಿ ಯುವಕನ ಬರ್ಬರ ಹತ್ಯೆ
ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ವರುಣ್ (28) ಚಾಕು ಇರಿತಕ್ಕೆ ಬಲಿಯಾದ ಯುವಕನಾಗಿದ್ದಾನೆ. ಮಂಜು ಹಾಗೂ ಸಂಜು ಎಂಬವರ ಕೈ ಹಾಗೂ ಕಾಲಿಗೆ ಚಾಕುವಿನಿಂದ ಇರಿಯಲಾಗಿದೆ.
ತರೀಕೆರೆ ಶಾಸಕ ಶ್ರೀನಿವಾಸ್ ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.
ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಗೆ ಕಬಾಬ್ ಮೂರ್ತಿ ಡ್ರ್ಯಾಗರ್ ಹಾಕಿದ್ದು, ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಇರಿಯಲಾಗಿದೆ. ವರುಣ್ ನ ಹೊಟ್ಟೆ ಹಾಗೂ ಪಕ್ಕೆಗೆ ಚಾಕುಯಿಂದ ಕಬಾಬ್ ಮೂರ್ತಿ ಇರಿದಿದ್ದಾನೆ.
ಇರಿತದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ವರುಣ್ ನನ್ನು ತಕ್ಷಣವೇ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ವರುಣ್ ಸಾವನ್ನಪ್ಪಿದ್ದಾನೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಸ್.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw