ಒಡಿಶಾದಲ್ಲಿ ರೈಲು ದುರಂತ ಹಿನ್ನೆಲೆ: ಭುವನೇಶ್ವರದಲ್ಲಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಸಭೆ
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭುವನೇಶ್ವರದ ರಾಜೀವ್ ಭವನದಲ್ಲಿಂದು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರು.
ಸಚಿವರೊಂದಿಗೆ ರಾಜ್ಯದ ಅಧಿಕಾರಿಗಳು ಸಹ ತೆರಳಿದ್ದಾರೆ. ಅವರು ಆಸ್ಪತ್ರೆ, ಶವಾಗಾರಗಳಿಗೆ ಭೇಟಿ ನೀಡಿ ರಾಜ್ಯದ ಪ್ರಯಾಣಿಕರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳ ಆಯುಕ್ತರು ಹಾಗೂ ಎನ್ ಡಿಆರ್‍ಎಫ್ ಮುಖ್ಯಸ್ಥರ ಜೊತೆಗೆ ಚರ್ಚಿಸಲಾಯಿತು. ಅಲ್ಲದೇ ದುರಂತದಲ್ಲಿ ಕರ್ನಾಟಕದ ಪ್ರಯಾಣಿಕರು ಸಿಲುಕಿ ತೊಂದರೆಗೊಳಗಾಗಿರುವ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw