ಗೃಹಜ್ಯೋತಿ ಯೋಜನೆಯಲ್ಲಿ ಬಾಡಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ: ಸಚಿವ ಪರಮೇಶ್ವರ್

ಗೃಹಜ್ಯೋತಿ ಯೋಜನೆಯಲ್ಲಿ ಬಿಪಿಎಲ್, ಎಪಿಎಲ್ ವರ್ಗೀಕರಣ ಮಾಡಿಲ್ಲ. ಸರ್ಕಾರ ಎಲ್ಲವನ್ನು ಸ್ಪಷ್ಟವಾಗಿ ಹೇಳಿದೆ. ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿಯವರು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗೆ ಇಷ್ಟೇ ಹಣ ಖರ್ಚಾಗುತ್ತೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಮುಖ್ಯಮಂತ್ರಿಗಳು ಎಲ್ಲ ವಿಚಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ. 12 ತಿಂಗಳ ಸರಾಸರಿ ತೆಗೆದುಕೊಳ್ಳುತ್ತೇವೆ, ಶೇಕಡ 10ರಷ್ಟು ಸೇರ್ಪಡೆ ಮಾಡುತ್ತವೆ. ಶೇಕಡ 10 ಬೆನಿಫಿಟ್ ಆಫ್ ಡೌಟ್ ನೀಡಿದ್ದೇವೆ. ಬಾಡಿಗೆದಾರರಿಗೂ ನಾವು ಕೊಡಬೇಕು ಅಲ್ವಾ. ಮಾಲಕರ ಹೆಸರಲ್ಲಿ ಅವರಿಗೆ ಲಾಭ ಆಗುತ್ತೆ. ಆದರೆ ಆ ಲಾಭ ಬಾಡಿಗೆದಾರರಿಗೆ ವರ್ಗಾವಣೆ ಆಗಲೇಬೇಕು. ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು. ಈ ಸಮಸ್ಯೆಯನ್ನು ನಾವು ಸಾರ್ಟ್ ಔಟ್ ಮಾಡುತ್ತೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw