ಅಶೋಕ್ ಗೆಹ್ಲೋಟ್ ಜೊತೆಗೆ ಮುನಿಸು: ಕಾಂಗ್ರೆಸ್ ತೊರೆದು ಹೊಸ ಪಕ್ಷವನ್ನು ಸ್ಥಾಪನೆ ಮಾಡ್ತಾರಾ ಸಚಿನ್ ಪೈಲಟ್..?
ರಾಜಸ್ಥಾನ ರಾಜ್ಯದಲ್ಲಿ ಈ ಹಿಂದಿನ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅಧಿಕಾರ ಕಿತ್ತಾಟದ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ತಮ್ಮ ಬೇಡಿಕೆಗೆ ಸಚಿನ್ ಪೈಲಟ್ ದೃಢವಾಗಿ ನಿಂತಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವದ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.
ಈ ಮಧ್ಯೆ ಸಚಿನ್ ಪೈಲಟ್ ಮುಂದಿನ ರಾಜಕೀಯ ನಡೆಯ ಬಗ್ಗೆ ತೀವ್ರವಾದ ಊಹಾಪೋಹ ಕೇಳಿಬಂದಿದೆ. ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಬಹುದು ಅಥವಾ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಬಹುದು ಎಂದು ಮೂಲಗಳು ತಿಳಿಸಿವೆ.
ರಾಜಸ್ಥಾನ ಕಾಂಗ್ರೆಸ್ ಮೂಲಗಳ ಪ್ರಕಾರ, ಪೈಲಟ್ ಈ ಸಮಯದಲ್ಲಿ ಯಾವುದೇ ಆತುರದ ತೀರ್ಮಾನ ತೆಗೆದುಕೊಳ್ಳಲ್ಲ. ಅವರು ಪಕ್ಷದ ಹೈಕಮಾಂಡ್ ಹೇಳಿದಂತೆ ಕೇಳುತ್ತಾರೆ ಎಂದಿದೆ. ಈ ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಅಶೋಕ್ ಗೆಹ್ಲೋಟ್ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಯುವಕರ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಬೇಕೆಂಬ ಪೈಲಟ್ ರ ಮನವಿಯನ್ನು ಪುರಸ್ಕರಿಸಬೇಕು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಕಳೆದ ವಾರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರೊಂದಿಗಿನ ಸಭೆಯಿಂದಲೂ ಪೈಲಟ್ ತೃಪ್ತಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
2018 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದಾಗಿನಿಂದ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅಧಿಕಾರ ಜಗಳದಲ್ಲಿ ತೊಡಗಿದ್ದಾರ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಸ್ಥಾನ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಬ್ಬರ ನಡುವೆ ಶಾಂತಿ ಮಾತುಕತೆ ನಡೆಸಲು ಕಾಂಗ್ರೆಸ್ ಪಕ್ಷವು ಪ್ರಯತ್ನಿಸುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw