ಗುಜರಾತ್ ನ ಖ್ಯಾತ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ..!
ಗುಜರಾತ್ ನ ಜಾಮ್ನಗರದ ಖ್ಯಾತ ಹೃದ್ರೋಗ ತಜ್ಞ ಗೌರವ್ ಗಾಂಧಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗಳಲ್ಲಿ ಪರಿಣತಿ ಹೊಂದಿ ಹೆಸರುವಾಸಿಯಾಗಿದ್ದ 41 ವರ್ಷದ ಇವರು ಪ್ರಮುಖ ವೈದ್ಯರಾಗಿದ್ದರು. ಇವರು ತಮ್ಮ ವೈದ್ಯಕೀಯ ವೃತ್ತಿಜೀವನದಲ್ಲಿ 16,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದರು.
ವೈದ್ಯ ಗೌರವ್ ಅವರು ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದ ಕೆಲವು ಗಂಟೆಗಳ ನಂತರ ತಮ್ಮ ಮನೆಯ ಸ್ನಾನಗೃಹದಲ್ಲಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ತಲುಪಿಸಿದ 45 ನಿಮಿಷಗಳಲ್ಲಿ ಅವರು ಸಾವನ್ನಪ್ಪಿದ್ದತೆ ಎಂದು ಎಂಪಿ ಶಾ ವೈದ್ಯಕೀಯ ಕಾಲೇಜಿನ ಡೀನ್ ನಂದಿನಿ ದೇಸಾಯಿ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಇವರು ಯಾವುದೇ ಅಸ್ವಸ್ಥತೆಯ ಲಕ್ಷಣಗಳನ್ನು ಹೊಂದಿರಲಿಲ್ಲ ಎಂಬುದು ಪ್ರಾಥಮಿಕವಾಗಿ ಮಾಹಿತಿ ಸಿಕ್ಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw