ಇನ್ನೂ ಮುಂಗಾರು ಮಳೆ ಆರಂಭವಾಗದಿರಲು ಕಾರಣ ಏನು ಗೊತ್ತಾ?
ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ವಾರದ ಬಳಿಕ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಬೇಗೆಯನ್ನು ಇನ್ನೂ ಒಂದು ವಾರ ಜನರು ಸಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಜೂನ್ 5 ರಂದು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿತ್ತು, ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾದ ಹಿನ್ನೆಲೆ ಕೇರಳಕ್ಕೆ ಮುಂಗಾರು ಪ್ರವೇಶ ತಡವಾಗಲಿದೆ ಎಂದು ಹೇಳಿದೆ.
ಒಂದೆಡೆ ಬಿಸಿಲಿನ ಬೇಗೆಯಿಂದ ಬೇಯುತ್ತಿರುವ ಜನರು ಮಳೆಗಾಗಿ ಹಾತೊರೆಯುತ್ತಿದ್ದಾರೆ. ಒಂದೆರಡು ಹನಿ ಮಳೆ ಬಿದ್ದು, ಮಳೆ ಮರೆಯಾಗುತ್ತಿದ್ದು, ಬೀಸಿಗೆಯ ಬಿಸಿಗೆ ಜನ ತತ್ತರಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕೂಡಾ ಕಂಡು ಬಂದಿದ್ದು, ಮೇಲ್ಮೈ ಸುಳಿಗಾಳಿ ಎದ್ದಿದೆ. ಹೀಗಾಗಿ, ಮುಂಗಾರು ವಿಳಂಬ ಆಗ್ತಿದೆ. ವಾತಾವರಣದಲ್ಲಿ ಆಗುತ್ತಿರುವ ಕ್ಷಿಪ್ರ ಬದಲಾವಣೆಯಿಂದಾಗಿ ಹವಾಮಾನ ಇಲಾಖೆ ಕೂಡ ಸ್ಪಷ್ಟ ಮಾಹಿತಿ ನೀಡಲು ಆಗುತ್ತಿಲ್ಲ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw