ಕೊಲ್ಹಾಪುರ ಹಿಂಸಾಚಾರದ ಬಗ್ಗೆ ದೇವೇಂದ್ರ ಫಡ್ನವೀಸ್ ಹೇಳಿಕೆ: ಅಸಾದುದ್ದೀನ್ ಒವೈಸಿ ವಾಗ್ದಾಳಿ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ‘ಔರಂಗಜೇಬ್ ಕಿ ಔಲಾದ್’ ಹೇಳಿಕೆ ವಿರುದ್ಧ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರ ಹಿಂಸಾಚಾರದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಫಡ್ನವೀಸ್, ‘ಇದ್ದಕ್ಕಿದ್ದಂತೆ, ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಔರಂಗಜೇಬ್ ಅವರ ಪುತ್ರರು ಜನಿಸಿದರು. ಅವರು ಔರಂಗಜೇಬನ ಫೋಟೋ ಇಟ್ಟುಕೊಂಡು ಪೋಸ್ಟರ್ ಗಳನ್ನು ತೋರಿಸುತ್ತಾರೆ. ಹೀಗಾಗಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದಿದ್ದರು.
ಅಲ್ಲದೇ ಇದ್ದಕ್ಕಿದ್ದಂತೆ ಔರಂಗಜೇಬನ ಈ ಪುತ್ರರು ಎಲ್ಲಿಂದ ಬಂದರು.? ಇದರ ಹಿಂದೆ ಯಾರಿದ್ದಾರೆ..?, ನಾವು ಇದನ್ನು ಕಂಡುಹಿಡಿಯುತ್ತೇವೆ ಎಂದು ಗುಡುಗಿದ್ದರು.
ಇದಕ್ಕೆ ತಮ್ಮ ಪಕ್ಷದ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯೆ ನೀಡಿದ ಓವೈಸಿ,’ದೇವೇಂದ್ರ ಫಡ್ನವೀಸ್ ‘ಔರಂಗಜೇಬ್ ಕೆ ಔಲಾದ್’ ಎಂದು ಹೇಳಿದರು. ನಿಮಗೆ ಎಲ್ಲವೂ ತಿಳಿದಿದೆಯೇ? ಹಾಗಾದರೆ ಗೋಡ್ಸೆ ಮತ್ತು ಆಪ್ಟೆ ಅವರ ಮಕ್ಕಳು ಯಾರು ಎಂದು ನೀವು ತಿಳಿದುಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ.
ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದ ನಂತರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಜನಸಮೂಹವನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw