ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ - Mahanayaka
11:20 AM Thursday 12 - December 2024

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್

10/06/2023

ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್​ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಜಾನ್ಸನ್ ಅವರು ಸಂಸತ್​ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಇದು ಪಾರ್ಟಿಗೇಟ್ ಹಗರಣ ಎಂಬ ಹೆಸರಿನಲ್ಲಿ ಬ್ರಿಟನ್​​ನಲ್ಲಿ ದೊಡ್ಡ ಸುದ್ದಿಯಾಗಿತ್ತು. ನಂತರ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವರದಿ ಬಿಡುಗಡೆಗೂ ಮೊದಲೇ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ನಾನು ಎಲ್ಲಿಯೂ ಸುಳ್ಳು ಹೇಳಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ದೂರಿದ್ದಾರೆ.

ಆದರೆ, ಸದನದ ದಿಕ್ಕುತಪ್ಪಿಸುವ ಪ್ರಮಾದ ಎಸಗಿದ್ದಕ್ಕಾಗಿ ಬೋರಿಸ್ ಜಾನ್ಸನ್ ಅವರು ಮಾರ್ಚ್​​​ನಲ್ಲಿ ಕ್ಷಮೆಯಾಚಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ