ಕರ್ನಾಟಕದಲ್ಲಿ ‘ಗ್ಯಾರಂಟಿ’ ಸಕ್ಸಸ್: ಮಧ್ಯಪ್ರದೇಶದಲ್ಲೂ ‘ಐದು ಗ್ಯಾರಂಟಿ’ ಘೋಷಿಸಿದ ಪ್ರಿಯಾಂಕಾ ಗಾಂಧಿ
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ.
ಅವರು ಜಬಲ್ಪುರ ಜಿಲ್ಲೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದ ಪ್ರತಿ ಮಹಿಳೆಗೆ ಮಾಸಿಕ 1,500 ರೂಪಾಯಿ, ಪ್ರತಿ ಮನೆಗೆ 500 ರೂಪಾಯಿಗೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್, 100 ಯೂನಿಟ್ ವಿದ್ಯುತ್ ಉಚಿತ ಮತ್ತು 200 ಯೂನಿಟ್ ಅರ್ಧ ಬೆಲೆಗೆ ನೀಡಲಾಗುವುದು, ರೈತರ ಸಾಲವನ್ನು ಮನ್ನಾ ಮಾಡಲಾಗುವುದು ಮತ್ತು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಘೋಷಿಸಿದರು.
ನಾವು ನರ್ಮದಾ ಮಾತೆಯ ದಡಕ್ಕೆ ಬಂದಿದ್ದೇವೆ. ನಾವು ಸುಳ್ಳು ಹೇಳುವುದಿಲ್ಲ ಎಂದ ಪ್ರಿಯಾಂಕಾ ಗಾಂಧಿ, ಬಿಜೆಪಿ ಇಲ್ಲಿಗೆ ಬಂದು ಘೋಷಣೆಗಳನ್ನು ಮಾಡುತ್ತಾರೆ. ಆದರೆ ಅವುಗಳನ್ನು ಪೂರೈಸುವುದಿಲ್ಲ. ಅವರು ಡಬಲ್ ಎಂಜಿನ್ ಮತ್ತು ಟ್ರಿಪಲ್ ಎಂಜಿನ್ ಬಗ್ಗೆ ಮಾತನಾಡುತ್ತಾರೆ. ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಅವರು ಇದನ್ನೇ ಹೇಳುತ್ತಿದ್ದರು. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಸಾರ್ವಜನಿಕರು ತೋರಿಸಿಕೊಟ್ಟಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw