ಚೆನ್ನೈನ ಮಕ್ಕಳ ಹಕ್ಕುಗಳ ಪ್ರತಿಪಾದಕಿ ಲಲಿತಾರಿಗೆ ‘ಇಕ್ಬಾಲ್ ಮಸಿ ಪುರಸ್ಕಾರ’
ಅವರು ಚೆನ್ನೈನ ಪ್ರಭಾವಿ ಮಕ್ಕಳ ಹಕ್ಕುಗಳ ಪ್ರತಿಪಾದಕಿ. ಅವರ ಹೆಸರೇ ಲಲಿತಾ ನಟರಾಜನ್. ಇವರ ಸೇವೆಯನ್ನು ಗುರುತಿಸಿ ಇವರಿಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಮೆರಿಕದ ಡಿಪಾರ್ಟ್ ಮೆಂಟ್ ಆಫ್ ಲೇಬರ್‌ನ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ನಡೆಸಿದ ಪ್ರಯತ್ನಗಳಿಗಾಗಿ ನೀಡುವ 2023ನೇ ಸಾಲಿನ ಇಕ್ಬಾಲ್ ಮಸಿ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ.
ಅಮೆರಿಕದ ಕಾನ್ಸಲ್ ಜನರಲ್ ಜುಡಿತ್ ರೇವಿನ್ ಈ ಪ್ರಶಸ್ತಿಯನ್ನು ಚೆನ್ನೈನ ಯುಎಸ್ ಕಾನ್ಸಲೇಟ್ ಜನರಲ್‍ನಲ್ಲಿ ನಡೆದ ಸಮಾರಂಭದಲ್ಲಿ ಲಲಿತಾ ನಟರಾಜನ್ ಅವರಿಗೆ ಪ್ರದಾನ ಮಾಡಿದರು.
ಇಕ್ಬಾಲ್ ಮಸಿ ಪುರಸ್ಕಾರವು ಅಮೆರಿಕದ ಕಾಂಗ್ರೆಸ್ ನೀಡುವ ಪ್ರಶಸ್ತಿಯಾಗಿದೆ. ಇದು ಯಾವುದೇ ನಗದು ಹೊಂದಿಲ್ಲ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಸಾಧಾರಣ ಕೊಡುಗೆ ನೀಡಿದವರನ್ನು ಗೌರವಿಸಲು ಈ ಪ್ರಶಸ್ತಿಯನ್ನು 2008ರಲ್ಲಿ ಸೆಕ್ರೆಟರಿ ಆಫ್ ಲೇಬರ್ ಪ್ರಾರಂಭ ಮಾಡಿತ್ತು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಹೋರಾಟ ಮತ್ತು ಅದರ ಬಗೆಗಿನ ತಿಳಿವಳಿಕೆ ಹೆಚ್ಚಿಸುವ ಸಲುವಾಗಿ ಪ್ರತಿವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಗುತ್ತದೆ. ಈ ಪ್ರಶಸ್ತಿಯೂ ಇದರ ಭಾಗವಾಗಿದೆ.
ಯಾರು ಈ ಲಲಿತಾ..?:
ಲಲಿತಾ ನಟರಾಜನ್ ಅವರು ಬಾಲಕಾರ್ಮಿಕ ವಿರುದ್ಧ ವಕೀಲರಾಗಿ ಮತ್ತು ಹೋರಾಟಗಾರರಾಗಿ ತಮ್ಮ ವೃತ್ತಿಜೀವನದುದ್ದಕ್ಕೂ ದುಡಿದಿದ್ದಾರೆ. ದಕ್ಷಿಣ ಭಾರತದಲ್ಲಿ ಬಾಲಕಾರ್ಮಿಕರ ಶೋಷಣೆಗೆ ಅಂತ್ಯ ಹಾಡಲು, ಮಕ್ಕಳ ಕಳ್ಳಸಾಗಣೆಗೆ ಒಳಗಾದವರನ್ನು ಅದರಲ್ಲೂ ಮುಖ್ಯವಾಗಿ ಜೀತಕ್ಕಿದ್ದವರನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.
ತಮಿಳುನಾಡು ಸರ್ಕಾರದ ಸಾಮಾಜಿಕ ರಕ್ಷಣೆ ಇಲಾಖೆಯ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಬಾಲಕಾರ್ಮಿಕ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಪೊಕ್ಸೊ ಅಡಿಯಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ದೊರೆಯುವಂತೆ ಮಾಡಿದ್ದಾರೆ. ಅಲ್ಲದೇ ಕೌಟುಂಬಿಕ ದೌರ್ಜನ್ಯ ಮತ್ತು ಲೈಂಗಿಕ ಶೋಷಣೆಗೆ ಒಳಗಾದವರಿಗೆ ಕಾನೂನು ಮತ್ತು ಕೌನ್ಸೆಲಿಂಗ್ ಬೆಂಬಲ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw