ಪ್ರಧಾನಿ ಮೋದಿ – ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಭೇಟಿ: ಶೀಘ್ರವೇ ಅಮೆರಿಕ ಅಧ್ಯಕ್ಷ ಬೈಡನ್ – ಮೋದಿ ಭೇಟಿ..?

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು.
ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಭೇಟಿಯ ನಿರೀಕ್ಷೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಕುರಿತ ಭಾರತ-ಯುಎಸ್ ಉಪಕ್ರಮ (ಐಸಿಇಟಿ) ಮತ್ತು ದ್ವಿಪಕ್ಷೀಯ ಸಹಕಾರದ ಇತರ ವಿಷಯಗಳ ಅಡಿಯಲ್ಲಿನ ಪ್ರಗತಿಯನ್ನು ಪರಾಮರ್ಶಿಸಲಾಯಿತು. ನನ್ನ ಮುಂಬರುವ ಅಮೆರಿಕ ಭೇಟಿಯ ಸಂದರ್ಭದಲ್ಲಿ ಜೋ ಬೈಡನ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಅಜಿತ್ ದೋವಲ್ ಅವರ ಆಹ್ವಾನದ ಮೇರೆಗೆ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಜೂನ್ 13 ರಂದು ನವದೆಹಲಿಗೆ ಅಧಿಕೃತ ಭೇಟಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw