ಇಂದಿರಾ ಕ್ಯಾಂಟೀನ್ ನಲ್ಲಿ ಬಡ ಜನರಿಗೆ ಸಿಗಲಿದೆ ಮೊಟ್ಟೆ!
ಕಳೆದ ಬಿಜೆಪಿ ಸರ್ಕಾರದಲ್ಲಿ ಜೀವ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್‌ಗೆ ಮರುಜೀವ ನೀಡಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬಡವರಿಗೆ ಇಲ್ಲಿ ಆಹಾರ ತಿನ್ನುವ ಶ್ರಮಿಕರಿಗೆ ಸೇರಿದಂತೆ ಬಹುತೇಕರಿಗೆ ಆಹಾರದಲ್ಲಿ ಪೌಷ್ಠಿಕಾಂಶವನ್ನು ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಆಹಾರ ತಜ್ಞರು ಕ್ಯಾಂಟೀನ್ ಗಳಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದು, ಈ ಹಿನ್ನೆಲೆ ಕ್ಯಾಂಟೀನ್‌ಗಳಲ್ಲಿ ಊಟದ ಜತೆಗೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆನ್ನಲಾಗಿದೆ.
2013-18ರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿತ್ತು. ಆದರೆ 2018-23ರ ವರಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ನಿರ್ಲಕ್ಷ್ಯಭಾವ ತೋರಿಸಿ ಅನೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿತ್ತು ಕೂಡ. ಆದರೀಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕಡೆಗಳಲ್ಲೂ ಇಂದೀರಾ ಕ್ಯಾಂಟೀನ್‌ಗಳನ್ನು ತೆರೆಯಲು ಮತ್ತೆ ಕ್ರಮ ವಹಿಸಲಾಗುತ್ತಿದೆ.
ಬೆಂಗಳೂರಿನ 250 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜತೆಗೆ ಕ್ಯಾಂಟೀನ್‌ನ ಊಟದ ಮೆನು ಬದಲಾವಣೆಯಾಗಲಿದೆ. ಮೆನುವನ್ನು ಬಹುತೇಕ ಮುಖ್ಯಮಂತ್ರಿಗಳೇ ಅಂತಿಮಗೊಳಿಸಲಿದ್ದಾರೆ. ಈ ನಡುವೆ ಸಾರ್ವಜನಿಕರು, ಕ್ಯಾಂಟೀನ್‌ನಲ್ಲಿ ಚಪಾತಿ, ರಾಗಿ ಮುದ್ದೆ ಟೀ ಸೇರಿದಂತೆ ಮಾಂಸಾಹಾರವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು.
“ವಾರದಲ್ಲಿ ಮೂರು ದಿನವಾದರೂ ಕೋಳಿ ಮೊಟ್ಟೆಯನ್ನು ನೀಡಬೇಕು ಇದರಿಂದ ಜನರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ಸ್ವಲ್ಪಮಟ್ಟಿಗೆ ಆದರೂ ನೀಗಿಸಬಹುದು. ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರ ನೀಡಲು ಕೋಳಿ ಮೊಟ್ಟೆ ಅತ್ಯುತ್ತಮವಾದ ಆಹಾರ” ಎಂದು ಆಹಾರ ತಜ್ಞರು ಹಾಗೂ ಬಿಬಿಎಂಪಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ವಾರದಲ್ಲಿ ಮೂರು ದಿನ ಕೋಳಿ ಮೊಟ್ಟೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw