ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲ: ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಹನೂರು: ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಬೆಳ್ಳಂ ಬೆಳ್ಳಗೆ ದಿಢೀರ್ ಪ್ರತಿಭಟನೆ ನಡೆಸಿದರು.
ಕಳೆದ ಮೂರು ದಿನಗಳಿಂದ ಸಮರ್ಪಕ ಬಸ್ ಇಲ್ಲದೆ ಇರುವುದರಿಂದ ಶಾಲಾ ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ, ಮೂರು ದಿನಗಳಿಂದ ಹೆಚ್ಚುವರಿ ಬಸ್ ಗಳನ್ನು ಬಿಡುವಂತೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗದೆ ಇರುವುದರಿಂದ ನೂರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಎಲ್ಲಾ ಕೆಎಸ್ಆರ್ ಟಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಆಕ್ರೋಶ : ವಿಶೇಷ ಜಾತ್ರ ಹಬ್ಬ ಹರಿದಿನ ಸಂದರ್ಭದಲ್ಲಿ ನಮಗೆ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಾಲೇಜಿನಲ್ಲಿ 10 ನಿಮಿಷ ತಡವಾಗಿ ಹೋದರು ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ, ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಮಪುರ ಗ್ರಾಮದ ಶ್ರೀನಿವಾಸ್ ಮಾತನಾಡಿ ಕೆಎಸ್ಆರ್ಟಿಸಿ ಬಸ್ ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw