ಮತಾಂತರ ಕಾಯ್ದೆ ರದ್ದು ಖಂಡಿಸಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಚಾಮರಾಜನಗರ: ಮತಾಂತರ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಸಿದ್ದರಾಮಯ್ಯ ಸರ್ಕಾರದ ನಡೆ ಖಂಡಿಸಿ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ.
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರಕ್ಕೆ ಕೇವಲ ಅನ್ಯಧರ್ಮಿಯರು ಮತ ಹಾಕಿಲ್ಲ, ಹಿಂದೂಗಳು ಮತ ಹಾಕಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದಿರುವುದು ಹಿಂದೂ ಸಮಾಜಕ್ಕೆ ಎಸಗಿದ ದ್ರೋಹವಾಹಿದೆ. ಆಮಿಷ, ಮರಳು ಮಾಡಿ ಮತಾಂತರ ಮಾಡುವುದಕ್ಕೆ ನಮ್ಮ ವಿರೋಧವಿದ್ದು ಕಾಯ್ದೆ ಇದ್ದರಷ್ಟೇ ಇದಕ್ಕೆ ಕಡಿವಾಣ ಬೀಳಲಿದೆ, ಸರ್ಕಾರದ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw