ರಾಹುಲ್ ಗಾಂಧಿಗೆ ರಾಂಚಿ ಕೋರ್ಟ್ ನಿಂದ ಸಮನ್ಸ್: ಇದು ಕಡೆಯ ಎಚ್ಚರಿಕೆ ಎಂದ ಕೋರ್ಟ್..!
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪನಾಮದ ವಿವಾದಾತ್ಮಕ ಹೇಳಿಕೆಗೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಂಚಿ ನ್ಯಾಯಾಲಯವು ಅಂತಿಮ ಸಮನ್ಸ್ ನೀಡಿದೆ. ಜುಲೈ 4 ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿಗೆ ನ್ಯಾಯಾಲಯ ಆದೇಶಿಸಿದೆ. ರಾಹುಲ್ ಗಾಂಧಿ ಅವರ ಉಪಸ್ಥಿತಿಯ ಬಗ್ಗೆ ಅವರ ವಕೀಲರು ಈ ಹಿಂದೆ ವಿನಾಯಿತಿ ಅರ್ಜಿ ಸಲ್ಲಿಸಿದ್ದರು.
2019 ರಲ್ಲಿ ರಾಂಚಿ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ದೂರುದಾರ ಪ್ರದೀಪ್ ಮೋದಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಕೀಲರು ಕಳೆದ ಫೆಬ್ರವರಿಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಮೇ 3 ರಂದು ತಿರಸ್ಕರಿಸಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿತ್ತು. ಇದೀಗ ರಾಂಚಿ ನ್ಯಾಯಾಲಯವು ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದ್ದು, ರಾಹುಲ್ ಪರ ವಕೀಲರು 15 ದಿನಗಳ ಕಾಲಾವಕಾಶ ಕೋರಿದ್ದರು. ಜುಲೈ 4ರಂದು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಆದರೆ ದೂರುದಾರರ ವಕೀಲ ಕುಶಾಲ್ ಅಗರ್ ವಾಲ್ ಅವರು ರಾಹುಲ್ ಗಾಂಧಿ ಅವರ ಹಾಜರಿಯ ವಿಳಂಬವನ್ನು ಬಲವಾಗಿ ವಿರೋಧಿಸಿದ್ದಾರೆ. ವಿನಾಯಿತಿಗಾಗಿ ಅವರ ಮನವಿಯನ್ನು ನ್ಯಾಯಾಲಯ ಈಗಾಗಲೇ ತಿರಸ್ಕರಿಸಿದ್ದರೂ, ಅವರು ವೈಯಕ್ತಿಕವಾಗಿ ಹಾಜರಾಗುವ ಮನಸ್ಥಿತಿಯಲ್ಲಿಲ್ಲ ಎಂದು ಅವರು ಹೇಳಿದ್ದಾರೆ.
ಆದರೆ ಅವರು ನ್ಯಾಯಾಲಯದ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಮತ್ತು ಹಾಜರಾಗಬೇಕಾಗುತ್ತದೆ. ಅಲ್ಲದ, ದೂರುದಾರರ ವಕೀಲ ಕುಶಾಲ್ ಅಗರ್ ವಾಲ್ ಅವರು, ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಇದು ಕೊನೆಯ ಸಮನ್ಸ್ ಎಂದು ಹೇಳಿದ್ದಾರೆ. ಇದರ ಹೊರತಾಗಿಯೂ, ಅವರು ವಿಚಾರಣೆಗೆ ಮತ್ತೂ ಬಾರದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw