ಚಲಿಸುತ್ತಿದ್ದ ಆಟೋರಿಕ್ಷಾದಲ್ಲೇ ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮಾತಿನ ಚಕಮಕಿಯ ನಂತರ ವ್ಯಕ್ತಿಯೊಬ್ಬ ತನ್ನ 30 ವರ್ಷದ ಗೆಳತಿಯನ್ನು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.
ಆರೋಪಿಯನ್ನು ದೀಪಕ್ ಬೋರ್ಸೆ ಎಂದು ಗುರುತಿಸಲಾಗಿದ್ದು, ಹರಿತವಾದ ಆಯುಧದಿಂದ ಗೆಳತಿಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನು ಅದೇ ಆಯುಧದಿಂದ ತನ್ನ ಕತ್ತು ಸೀಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಸಂಘರ್ಷ್ ನಗರ್ ಚಂಡಿವಾಲಿ ನಿವಾಸಿ ಪಂಚಶೀಲಾ ಅಶೋಕ್ ಜಾಮ್ದಾರ್ ಎಂಬಾಕೆಯ ಮೇಲೆ ಆಕೆಯ ಪ್ರಿಯಕರ ಹಲ್ಲೆ ನಡೆಸಿದ್ದು, ರಿಕ್ಷಾದಲ್ಲಿ ಯಾವುದೋ ವಿಷಯದ ಬಗ್ಗೆ ಇಬ್ಬರೂ ಜಗಳವಾಡಿದ್ದಾರೆ. ಮುಂಬೈನ ಸಕಿನಾಕಾ ಪ್ರದೇಶದ ಖೈರಾನಿ ರಸ್ತೆಯ ದತ್ ನಗರದಲ್ಲಿ ಈ ಘಟನೆ ನಡೆದಿದೆ.
ದೀಪಕ್ ಬೋರ್ಸೆ ಚಲಿಸುತ್ತಿದ್ದ ಆಟೋರಿಕ್ಷಾದೊಳಗೆ ಪಂಚಶಿಲಾ ಜಾಮ್ದಾರ್ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಅವಳು ತಪ್ಪಿಸಿಕೊಳ್ಳೋಕೇ ಪ್ರಯತ್ನಿಸಿ ರಿಕ್ಷಾದಿಂದ ಜಿಗಿದಿದ್ದಾಳೆ. ಆತ ಅದೇ ಹರಿತವಾದ ಆಯುಧದಿಂದ ತನ್ನ ಕುತ್ತಿಗೆಯನ್ನು ಸೀಲುವ ಮೂಲಕ ಪ್ರಿಯಕರ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಸಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಯುವತಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಆರೋಪಿ ಚೇತರಿಸಿಕೊಳ್ಳುತ್ತಿದ್ದಾನೆ. ಕೊಲೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಸಕಿನಾಕಾ ಪೊಲೀಸರು ಬೋರ್ಸೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw