ದಕ್ಷಿಣ ಕನ್ನಡ: ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದ ಕಾಂಗ್ರೆಸ್ ನಾಯಕರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಕ್ಲಾಕ್ ಟವರ್ ಎದುರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು.
ಅಕ್ಕಿ ಕೊಡಲು ಒಪ್ಪಿಕೊಂಡಿದ್ದ ಭಾರತೀಯ ಆಹಾರ ನಿಗಮವು ಕೇಂದ್ರ ಸರ್ಕಾರದ ಒತ್ತಡದಿಂದ ಈಗ ಅಕ್ಕಿ ಕೊಡಲು ನಿರಾಕರಿಸುತ್ತಿದೆ. ಜನರ ಆಹಾರ ಭದ್ರತೆ ಕಸಿಯುವ ಕೆಲಸ ಕೇಂದ್ರ ಸರ್ಕಾರದಿಂದ ಆಗುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆರೋಪಿಸಿದರು.
ದುರ್ಬಲ ವರ್ಗದ ಪರವಾಗಿರುವ ಪಕ್ಷ ಕಾಂಗ್ರೆಸ್. ಬಡವರಿಗೆ ಉಚಿತ ಅಕ್ಕಿ ಕೊಡುವ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ಸಿದ್ದರಾಮಯ್ಯ. ಹಿಂದೆ ಕಾಂಗ್ರೆಸ್ ಅಧಿಕಾರ ಪಡೆದಾಗ ಈ ಯೋಜನೆ ಪ್ರಥಮ ಬಾರಿಗೆ ಜಾರಿಗೊಂಡಿತು. ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ , ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಹೊರಟಿದ್ದು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಇದಕ್ಕೆ ಅಡ್ಡಿ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ:https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw