ಮುಂಬೈ ದಾಳಿ: ಸಾಜಿದ್ ಮಿರ್ ನನ್ನು ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆ: ಕಾರಣವೇನು..? - Mahanayaka
1:01 PM Thursday 12 - December 2024

ಮುಂಬೈ ದಾಳಿ: ಸಾಜಿದ್ ಮಿರ್ ನನ್ನು ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆ: ಕಾರಣವೇನು..?

20/06/2023

26/11ರ ಮುಂಬೈ ದಾಳಿಯ ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್​​ ಖೈದಾ ಸ್ಯಾಂಕ್ಷನ್ಸ್ ಕಮಿಟಿ’ಯ ಅಡಿಯಲ್ಲಿ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಬಗ್ಗೆ ಅಮೆರಿಕ ಪ್ರಸ್ತಾವ ಸಲ್ಲಿಸಿತ್ತು. ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕೂಡ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿತ್ತು. ಮಿರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ.

26/11 ಮುಂಬೈ ದಾಳಿಯಲ್ಲಿ ಶಾಮೀಲಾದ ವಿಚಾರವಾಗಿ ಅಮೆರಿಕವು ಆತನ ಮೇಲೆ 5 ದಶಲಕ್ಷ ಡಾಲರ್ ಇನಾಮು ಘೋಷಿಸಿದೆ.

ಜೂನ್‌ ನಲ್ಲಿ, ಪಾಕಿಸ್ತಾನದ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಮೀರ್‌ಗೆ 15 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ