ಹಿಜಾಬ್ ಧರಿಸದಂತೆ ತಡೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಪ್ರಾಂಶುಪಾಲರು ಮತ್ತು ಶಿಕ್ಷಕರು ಹೇಳಿದ ಹಿನ್ನೆಲೆಯಲ್ಲಿ ಹೈದ್ರಾಬಾದ್ ನ ಹಯಾತ್ ನಗರದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಗಳು ತಲೆಗೆ ಸ್ಕಾರ್ಫ್ ಧರಿಸಿ ಶಾಲೆಗೆ ಬರುತ್ತಿದ್ದರು. ಇದನ್ನು ಕಂಡ ಶಾಲಾ ಪ್ರಾಂಶುಪಾಲರು ಮತ್ತು ಶಿಕ್ಷಕರು ತರಗತಿಯಲ್ಲಿ ಸ್ಕಾರ್ಫ್ ಧರಿಸದಂತೆ ಆದೇಶಿಸಿದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಾಂಶುಪಾಲರಾದ ಪೂರ್ಣಿಮಾ ಶ್ರೀವಾಸ್ತವ್ ಮತ್ತು ಶಿಕ್ಷಕಿ ಮಾಧುರಿ ಕವಿತಾ ವಿರುದ್ಧ ಹಯತ್‌ನಗರ ಪೊಲೀಸರು ಸೆಕ್ಷನ್ 153 ಎ, 295, 292 ಮತ್ತು ಇತರ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw