ಔರಂಗಜೇಬ್ ಚಿತ್ರ ಇದ್ದ ಬೈಕ್ ನಲ್ಲಿ ರೀಲ್: ನಾಲ್ವರು ಪೊಲೀಸ್ ಬಲೆಗೆ
ಔರಂಗಜೇಬ್ ಅವರ ಚಿತ್ರವಿರುವ ಬೈಕ್ ನಲ್ಲಿ ಸವಾರಿ ಮಾಡುತ್ತಾ ರೀಲ್ ಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಮಹಾರಾಷ್ಟ್ರ ಪೊಲೀಸರು ಲಾತೂರ್ ಎಂಬಲ್ಲಿ ಬಂಧಿಸಿದ್ದಾರೆ. ಈ ವೀಡಿಯೊ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಲಾತೂರಿನ ವಿವೇಕಾನಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಔರಂಗಜೇಬ್ ಹೆಸರಿನಲ್ಲಿ ರಾಜಕೀಯ ಚರ್ಚೆ ಜೋರಾಗಿದೆ. ಜೂನ್ ನಲ್ಲಿ ಮೊಘಲ್ ಚಕ್ರವರ್ತಿ ಮತ್ತು ಮೈಸೂರು ರಾಜ ಟಿಪ್ಪು ಸುಲ್ತಾನ್ ಅವರನ್ನು ಕೆಲವರು ಹೊಗಳಿ ಹಾಕಿದ್ದ ವಾಟ್ಸಾಪ್ ಸ್ಟೇಟಸ್ ನಂತರ ಕೊಲ್ಹಾಪುರ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿತ್ತು.
ಇದನ್ನು ಖಂಡಿಸಿ ಭಜರಂಗದಳದ ಸ್ಥಳೀಯ ಘಟಕ ಬಂದ್ ಗೆ ಕರೆ ನೀಡಿತ್ತು. ಕೊಲ್ಹಾಪುರ ಬಂದ್ ಕರೆ ಸಂದರ್ಭದಲ್ಲಿ ಶಿವಾಜಿ ಚೌಕ್ ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಕಲ್ಲು ತೂರಾಟ ಮತ್ತು ವಿಧ್ವಂಸಕ ಕೃತ್ಯಕ್ಕಾಗಿ ಪೊಲೀಸರು 36 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ನವೀ ಮುಂಬೈ ನಗರದಲ್ಲಿ ಔರಂಗಜೇಬ್ ಅವರ ಚಿತ್ರವನ್ನು ತನ್ನ ಪ್ರೊಫೈಲ್ ಚಿತ್ರವಾಗಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿತ ನವೀ ಮುಂಬೈನ ಜಿಯೋ ಗ್ಯಾಲರಿಯಲ್ಲಿ ಕೆಲಸ ಮಾಡುತ್ತಿದ್ದ. ಈ ಕುರಿತು ವಾಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿಗಳ ಪ್ರಕಾರ, ಆರೋಪಿಗಳು ವೀಡಿಯೋವನ್ನು ಅಪ್ಲೋಡ್ ಮಾಡಿದಾಗ ಯಾರೋ ಸ್ಕ್ರೀನ್ ಶಾಟ್ ತೆಗೆದುಕೊಂಡು ಅದನ್ನು ವೈರಲ್ ಮಾಡಿದ್ದಾರೆ. ಈ ವಿಚಾರ ಸ್ಥಳೀಯ ಹಿಂದೂ ಕಾರ್ಯಕರ್ತರಿಗೆ ತಲುಪುತ್ತಿದ್ದಂತೆ ಅವರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw