ಇಸ್ಲಾಂ ಧರ್ಮದಲ್ಲಿ ಮದುವೆಗೆ ಮುಂಚಿತವಾಗಿ ಲೈಂಗಿಕತೆಯನ್ನು ನಿಷೇಧಿಸಲಾಗಿದೆ: ಅಲಹಾಬಾದ್ ಹೈಕೋರ್ಟ್
ಮದುವೆಗೆ ಮೊದಲು ಚುಂಬಿಸುವುದು, ಸ್ಪರ್ಶಿಸುವುದು ಸೇರಿದಂತೆ ಮುಂತಾದ ಯಾವುದೇ ಲೈಂಗಿಕ, ಕಾಮಪ್ರಚೋದಕ ಕೃತ್ಯಗಳನ್ನು ಇಸ್ಲಾಂನಲ್ಲಿ ನಿಷೇಧಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಹೇಳಿದೆ.
ಈ ಮೂಲಕ ಪೊಲೀಸರ ಕಿರುಕುಳದಿಂದ ರಕ್ಷಣೆ ಕೋರಿ ಅಂತರ್ ಧರ್ಮೀಯ ಲಿವ್ ಇನ್ ಸಂಬಂಧ ಹೊಂದಿರುವ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನ್ಯಾಯಮೂರ್ತಿ ಸಂಗೀತಾ ಚಂದ್ರ ಮತ್ತು ನ್ಯಾಯಮೂರ್ತಿ ನರೇಂದ್ರ ಕುಮಾರ್ ಜೋಹರಿ ಅವರ ನ್ಯಾಯಪೀಠವು, ಮುಸ್ಲಿಂ ಕಾನೂನಿನಲ್ಲಿ ವಿವಾಹ ಪೂರ್ವ ಲೈಂಗಿಕತೆಗೆ ಯಾವುದೇ ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಇಸ್ಲಾಂ ಧರ್ಮದಲ್ಲಿ ಇಂತಹ ವಿವಾಹಪೂರ್ವ ಲೈಂಗಿಕತೆಗೆ ಅವಕಾಶವಿಲ್ಲ. ವಾಸ್ತವವಾಗಿ ಇದನ್ನು ಇಸ್ಲಾಂನಲ್ಲಿ ‘ಹರಾಮ್’ ಎಂದು ಹೇಳಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ತಾಯಿ, ತಮ್ಮ ನಮ್ಮ ಲಿವ್-ಇನ್ ಸಂಬಂಧದ ಬಗ್ಗೆ ಅತೃಪ್ತಿ ಹೊಂದಿದ್ದಾರೆ. ಅವರು ಕಿರುಕುಳ ಕೊಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಆರೋಪಿಸಿ ಅಂತರ್ ಧರ್ಮೀಯ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಅಭಿಪ್ರಾಯ ಹೇಳಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw