ಕೆಎಸ್ಸಾರ್ಟಿಸಿ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಂಶ ಇಲ್ಲಿದೆ - Mahanayaka

ಕೆಎಸ್ಸಾರ್ಟಿಸಿ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಂಶ ಇಲ್ಲಿದೆ

ksrtc bus
25/06/2023

ಕೆಎಸ್ ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಕೈ ತುಂಡಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಆದರೆ, ಈ ವಿಡಿಯೋದ ಸತ್ಯಾಂಶ ಇದೀಗ ಬಯಲಾಗಿದೆ.


Provided by

ಜೂನ್ 18ರಂದು ಕ.ರಾ.ರ.ಸಾ.ನಿಗಮದ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1:45 ಗಂಟೆಗೆ ಬಸವರಾಜಪುರದ ಬಳಿಯಲ್ಲಿ ಎದುರಿನಿಂದ ಬಂದ ಲಾರಿ(TN-77-Q-8735)ಯೊಂದು ಬಸ್ಸಿನ ಬಲಭಾಗದ ಕಿಟಕಿ ಬಳಿಯ ಆಸನದಲ್ಲಿ ಕುಳಿತಿದ್ದ ಮಹಿಳೆಗೆ ತಾಗಿದೆ ಪರಿಣಾಮವಾಗಿ ಮಹಿಳೆಯ ಬಲಕೈಗೆ ಗಂಭೀರವಾದ ಗಾಯವಾಗಿದೆ.

ತಕ್ಷಣವೇ ಗಾಯಗೊಂಡ ಮಹಿಳೆಯನ್ನು ಸಾರಿಗೆ ಅಧಿಕಾರಿಗಳು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಉತ್ತಮ ಚಿಕಿತ್ಸೆ ನೀಡಲಾಗಿದೆ. ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.


Provided by

ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆ ಬಸ್ಸಿನ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂಬಂತೆ ಅಪಪ್ರಚಾರ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಶಕ್ತಿ ಯೋಜನೆ ಬಗ್ಗೆ ಅಪಪ್ರಚಾರ:

ರಾಜ್ಯಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಪ್ರಯೋಜನಕಾರಿಯಾಗಿದೆ. ಈಗಾಗಲೇ ಮುಂದಿನ ಹಂತದಲ್ಲಿ ಈ ಯೋಜನೆಯನ್ನು ಕ್ರಮ ಬದ್ಧವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಆದರೆ, ಫ್ರೀ ಬಸ್ ವಿಚಾರದಲ್ಲಿ ಎಲ್ಲೋ ಕೆಲವೆಡೆಗಳಲ್ಲಿ ನಡೆಯುತ್ತಿರುವ ಕೆಲವೇ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು, ಈ ಯೋಜನೆಯೇ ಸರಿ ಇಲ್ಲ, ಜನರಿಗೆ ಪ್ರಯೋಜನವಾಗ್ತಿಲ್ಲ,, ಸಮಸ್ಯೆಯಾಗುತ್ತಿದೆ ಎನ್ನುವಂತೆ ಬಿಂಬಿಸಲಾಗುತ್ತಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ.  ರಾಜ್ಯ ಸರ್ಕಾರ ಈಗಾಗಲೇ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದೆ. ಆದರೆ ಈವರೆಗೆ ಯಾವುದೇ ಕ್ರಮಗಳಾದ ಬಗ್ಗೆ ಮಾಹಿತಿ ದೊರೆತಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ