ಮಣಿಪುರ ಹಿಂಸಾಚಾರ: ‘ವಜಾ’ ಮಾಡಿ ಎಂಬ ಆಕ್ರೋಶದ ಬೆನ್ನಲ್ಲೇ ಅಮಿತ್ ಶಾ ಭೇಟಿಯಾದ ಮಣಿಪುರ ಸಿಎಂ ಬಿರೇನ್ ಸಿಂಗ್
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಮಣಿಪುರ ಮುಖ್ಯಮಂತ್ರಿಯನ್ನು ವಜಾಗೊಳಿಸುವ ಬಗ್ಗೆ ಅಭಿಪ್ರಾಯ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಇಂದು ಬೆಳಿಗ್ಗೆ ಇಂಫಾಲ್ ನಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಎನ್ ಬಿರೇನ್ ಸಿಂಗ್ ಅವರು ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಮಣಿಪುರದ ಪರಿಸ್ಥಿತಿ ಮತ್ತು ರಾಜ್ಯದಲ್ಲಿ ಸಹಜ ಸ್ಥಿತಿಗೆ ತರಲು ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ವಿವರಿಸಿದರು. ನಂತರ ಅವರು ಮತ್ತೆ ಮಣಿಪುರಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.
ಮಣಿಪುರದಲ್ಲಿ ಸಾಮಾನ್ಯ ಸ್ಥಿತಿಯನ್ನು ತರಲು ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವರು ಇದೇ ವೇಳೆ ಭರವಸೆ ನೀಡಿದ್ದಾರೆ ಎಂದು ಸಭೆಯ ನಂತರ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿಂಸಾಚಾರವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಿವೆ ಎಂದು ಮೂಲಗಳು ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw