ದಿಲ್ಲಿಯಲ್ಲಿ ಮಳೆ ಅಬ್ಬರ: ಹಿಮಾಚಲದಲ್ಲಿ ಪ್ರವಾಹ; ದೇಶದ ಹಲವು ರಾಜ್ಯಗಳಲ್ಲಿ ಮಳೆ ಹೇಗಿದೆ ಗೊತ್ತಾ..?
ಗುಜರಾತ್, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಹರಿಯಾಣ, ಪಂಜಾಬ್ ಮತ್ತು ರಾಷ್ಟ್ರ ರಾಜಧಾನಿಯಂತಹ ರಾಜ್ಯಗಳಿಗೆ ಮಾನ್ಸೂನ್ ಆಗಮಿಸುತ್ತಿದ್ದಂತೆ ಭಾರತದ ಕೆಲವು ಭಾಗಗಳಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು. ಭಾರೀ ಮಳೆಯಿಂದಾಗಿ ಕೆಲವು ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ, ಕರ್ನಾಟಕ, ಕೇರಳ, ತಮಿಳುನಾಡು, ಛತ್ತೀಸ್ ಗಢ, ಒಡಿಶಾ, ಈಶಾನ್ಯ ಭಾರತ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶದ ಹೆಚ್ಚಿನ ಭಾಗಗಳು ಮತ್ತು ಹರಿಯಾಣದ ಕೆಲವು ಭಾಗಗಳು ಸೇರಿದಂತೆ ಭಾರತದ ಹಲವಾರು ಭಾಗಗಳಲ್ಲಿ ಮಾನ್ಸೂನ್ ಪ್ರವೇಶಿಸಿದೆ.
ಹೀಗಾಗಿ ಹವಾಮಾನ ಇಲಾಖೆಯು ದೇಶದ ವಿವಿಧ ಭಾಗಗಳಿಗೆ ಎಚ್ಚರಿಕೆ ನೀಡಿದೆ. ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಇನ್ನು ಹಲವಾರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ನೈನಿತಾಲ್, ಚಂಪಾವತ್, ಪಿಥೋರಗಡ್, ಬಾಗೇಶ್ವರ್, ಡೆಹ್ರಾಡೂನ್, ತೆಹ್ರಿ ಮತ್ತು ಪೌರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಮಾನ್ಸೂನ್ ನಿಗದಿತ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಅಪ್ಪಳಿಸಿತು. 1961 ರ ಜೂನ್ 21 ರ ನಂತರ ಮೊದಲ ಬಾರಿಗೆ ಮುಂಬೈ ಮತ್ತು ದೆಹಲಿಯಲ್ಲಿ ಮಾನ್ಸೂನ್ ಆಗಮನವು ಒಂದೇ ದಿನ ಸಂಭವಿಸಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ದೆಹಲಿಗೆ ಸೋಮವಾರ (ಜೂನ್ 26) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬುಧವಾರ (ಜೂನ್ 27) ಮತ್ತು ಗುರುವಾರ (ಜೂನ್ 28) ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw