ಅಯ್ಯೋ ವಿಧಿಯೇ: ಕಬಡ್ಡಿ ಮ್ಯಾಚ್ ಗೆ ಮಗನನ್ನು ಬೈಕಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಯಮನಾಗಿ ಬಂದ ಕಾರು..!
ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮೃತಪಟ್ಟು ಮಗ ಗಾಯಗೊಂಡ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವ್ಯಾನ್ ನ ಬದಿಯಲ್ಲಿ ಬೈಕನ್ನು ನಿಲ್ಲಿಸುವ ವೇಳೆ ಈ ಅವಘಡ ಸಂಭವಿಸಿದೆ. ಮೃತನನ್ನು ಪೊಲ್ಲಾಚಿಯ 38 ವರ್ಷದ ಜಾಕಿರ್ ಹುಸೇನ್ ಎಂದು ಗುರುತಿಸಲಾಗಿದೆ.
ಇವರು ತಮ್ಮ 15 ವರ್ಷದ ಮಗ ಅಜ್ಮಲ್ ಅವರೊಂದಿಗೆ ತಿರುಚ್ಚಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಜ್ಮಲ್ ಕಬಡ್ಡಿ ಪಂದ್ಯದಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ತಂದೆ ಮಗನನ್ನು ಬೈಕಲ್ಲಿ ಕರೆದುಕೊಂಡು ಹೋಗುತ್ತಿದ್ದರು.
ಇವರು ವೇಲಂಥಾವಲಂ ಸಮೀಪಿಸುತ್ತಿದ್ದಾಗ ಅತಿ ವೇಗದಲ್ಲಿ ಪ್ರಯಾಣಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ವೇಳೆ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಯಿಂದ ಜಾಕೀರ್ ಹುಸೇನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಜ್ಮಲ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw