ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಎಬಿವಿಪಿ ಪ್ರತಿಭಟನೆ - Mahanayaka

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಎಬಿವಿಪಿ ಪ್ರತಿಭಟನೆ

abvp
28/06/2023

ಚಿಕ್ಕಮಗಳೂರು: ಶಕ್ತಿ ಯೋಜನೆಯಿಂದ ಬಸ್ ಸಮಸ್ಯೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು,  ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಶಾಲಾ ಕಾಲೇಜ್ ಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಉಚಿತ ಬಸ್ ಸೇವೆಯಿಂದಾಗಿ ಗ್ರಾಮಾಂತರ ಬಸ್ ಗಳು ಹೌಸ್ ಪುಲ್ ಆಗುತ್ತಿದೆ. ಬಸ್ ಗಳಿಗೆ ಹತ್ತಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬೆಳಗ್ಗೆ–ಸಂಜೆ ಬಸ್ ಗಳ ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ