ಇವರ ದುರಂತ ಸಾವಿಗೆ ಜಾತಿಯೇ ಕಾರಣವಾಯ್ತು!
ಕೋಲಾರ: ಜಾತಿಯ ಕಾರಣಕ್ಕಾಗಿ ಪ್ರೇಮಿಗಳು ದುರಂತ ಅಂತ್ಯ ಕಂಡ ದಾರುಣ ಘಟನೆಯೊಂದು ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದ್ದು, ತಂದೆಯೇ ಮಗಳನ್ನು ಹತ್ಯೆ ಮಾಡಿದ್ದರೆ ಅತ್ತ, ಪ್ರೇಯಸಿಯನ್ನು ಕಳೆದುಕೊಂಡ ನೋವಿನಿಂದ ಯುವಕ ಸಾವಿಗೆ ಶರಣಾಗಿದ್ದಾನೆ.
ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20) ಹಾಗೂ ಅದೇ ಗ್ರಾಮದ ಗಂಗಾಧರ್ (24) ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಕೀರ್ತಿಯ ತಂದೆ ಮಗಳಿಗೆ ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅಲ್ಲದೇ ಬೇರೊಬ್ಬನೊಂದಿಗೆ ವಿವಾಹ ಮಾಡಲು ಮುಂದಾಗಿದ್ದಾನೆನ್ನಲಾಗಿದೆ.
ಆದರೆ ಯುವತಿಯು ತಾನು ಪ್ರೀತಿಸಿದ ಯುವಕನನ್ನೇ ಮದುವೆ ಮಾಡಿಕೊಡುವಂತೆ ಪಟ್ಟು ಹಿಡಿದಿದ್ದು, ಇದರಿಂದ ಆಕ್ರೋಶಗೊಂಡು ಪುತ್ರಿಯನ್ನು ಕತ್ತು ಹಿಸುಕಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾನೆ.
ಇನ್ನೂ ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ವಿಚಾರ ತಿಳಿದು ತೀವ್ರವಾಗಿ ನೊಂದ ಗಂಗಾಧರ್, ಆಕೆಯ ಅಗಲಿಕೆಯನ್ನು ಸಹಿಸಲಾಗದೇ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೀರ್ತಿಯ ತಂದೆ ಕೃಷ್ಣಮೂರ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw