ರಥಯಾತ್ರೆಯ ವೇಳೆ ನಡೆಯಿತು ಅವಘಡ: ರಥದ ಮೇಲೆ ವಿದ್ಯುತ್ ತಂತಿ ಬಿದ್ದು 6 ಮಂದಿ ಸಾವು
ಕಬ್ಬಿಣದಿಂದ ಮಾಡಿದ ರಥದ ಮೇಲೆ ತಂತಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ.
ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ಕಾರ್ಯಕ್ರಮವೊಂದರ ಮೆರವಣಿಗೆ ನಡೆಯುತ್ತಿದ್ದಾಗ ರಥದ ಮೇಲೆ ತಂತಿ ಬಿದ್ದಿದೆ. ಇದರಲ್ಲಿ ಕನಿಷ್ಠ 20 ಮಂದಿ ಕುಳಿತಿದ್ದರು. ವಿದ್ಯುತ್ ಸ್ಪರ್ಶದಿಂದ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.
ರಥಕ್ಕೂ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲವರು ಗಾಯಗೊಂಡಿದ್ದಾರೆ. ಸಾವು ನೋವುಗಳು ಹೆಚ್ಚಾಗುವ ನಿರೀಕ್ಷೆಯಿದೆ. ಗಾಯಗೊಂಡವರನ್ನು ಕುಮಾರ್ ಘಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಅವರನ್ನು ಉನಕೋಟಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw