ಅಕ್ರಮ ಮದ್ಯ ಸಾಗಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್: ವಾಹನ ವಶ - Mahanayaka
8:06 AM Wednesday 5 - February 2025

ಅಕ್ರಮ ಮದ್ಯ ಸಾಗಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್: ವಾಹನ ವಶ

chamarajanagara
30/06/2023

ಹನೂರು: ಅಕ್ರಮ ಮದ್ಯ ಸಾಗಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸಾಗಣೆಗೆ ಬಳಸಿದ ವಾಹನವನ್ನು ವಶಕ್ಕೆ ಪಡೆಯುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಸೀಗಪ್ಪ(28) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಿಂದ ತೋಮಿಯರ್ ಪಾಳ್ಯ ಗ್ರಾಮದ ಕಡೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವೃತ ನಿರೀಕ್ಷಕ ಶಶಿಕುಮಾರ್  ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಸಾಗಟ ಮಾಡುತ್ತಿದ್ದ ವಿವಿಧ ಕಂಪನಿಯ 40ಲೀ  ಮದ್ಯ, ಸಾಗಾಟಕ್ಕೆ ಬಳಸಿದ್ದ  KA -01AE 3437 ನಂಬರಿನ ಇಂಡಿಕಾ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ರಾಜೇಂದ್ರ ಪ್ರಸಾದ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವರಾಜು ಮುಖ್ಯಪೇದೆ ಈಶ್ವರ್ ಪೇದೆಗಳಾದ ಚಂದ್ರಶೇಖರ್ ಪ್ರಭುಸ್ವಾಮಿ ರಾಜು ರಾಘವೇಂದ್ರ ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ