ಒಡಿಶಾ ಭೀಕರ ರೈಲು ದುರಂತ: ಆಗ್ನೇಯ ವಲಯದ ಜನರಲ್ ಮ್ಯಾನೇಜರ್ ಕೆಲಸಕ್ಕೆ ಕುತ್ತು; ಹೊಸ ಅಧಿಕಾರಿಯ ನೇಮಕ
ಒಡಿಶಾದ ಬಾಲಸೋರ್ ಎಂಬಲ್ಲಿ ನಡೆದಿದ್ದ ಮೂರು ರೈಲುಗಳ ಸರಣಿ ಅಪಘಾತದ ಸುಮಾರು ಒಂದು ತಿಂಗಳ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಎಂಬುವವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ.
ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಳ್ಳಲು ಅನಿಲ್ ಕುಮಾರ್ ಮಿಶ್ರಾ ಅವರಿಗೆ ಸಂಪುಟದ ನೇಮಕಾತಿ ಸಮಿತಿ ಅನುಮತಿ ನೀಡಿದೆ.
“ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ಆಗ್ನೇಯ ರೈಲ್ವೆಯ ಹೊಸ ಜನರಲ್ ಮ್ಯಾನೇಜರ್ ಆಗಿ ಅನಿಲ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಭಾರತೀಯ ರೈಲ್ವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಜೂನ್ 2 ರಂದು ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ ಪ್ರೆಸ್, ಹೌರಾಗೆ ಹೋಗುವ ಶಾಲಿಮಾರ್ ಎಕ್ಸ್ ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ತ್ರಿವಳಿ ರೈಲು ಅಪಘಾತದ ದುರಂತ ಘಟನೆಯಲ್ಲಿ 291 ಮಂದಿ ಸಾವನ್ನಪ್ಪಿದ್ದರು. 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಏತನ್ಮಧ್ಯೆ, ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ತ್ರಿವಳಿ ರೈಲು ಡಿಕ್ಕಿಯಾದ ನಂತರ ಭುವನೇಶ್ವರದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ 52 ಶವಗಳನ್ನು ಇನ್ನೂ ಗುರುತಿಸಲಾಗಿಲ್ಲ.
ಏಮ್ಸ್ ಭುವನೇಶ್ವರದಲ್ಲಿ 81 ಶವಗಳಿವೆ. ಹೀಗಾಗಿ ನಾವು ಅವುಗಳ ಮಾದರಿಗಳನ್ನು ಡಿಎನ್ ಎ ಪರೀಕ್ಷೆಗೆ ಕಳುಹಿಸಿದ್ದೇವೆ. ಅದರಲ್ಲಿ 29 ಮಾದರಿಗಳ ದೃಢೀಕರಣವನ್ನು ಸ್ವೀಕರಿಸಲಾಗಿದೆ ಮತ್ತು ಅವರ ಸಂಬಂಧಿಕರು / ಹಕ್ಕುದಾರರಿಗೆ ಮಾಹಿತಿ ನೀಡಲಾಗಿದೆ ಎಂದು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್ ಮೇಯರ್ ಸುಲೋಚ್ನಾ ದಾಸ್ ಎಎನ್ಐಗೆ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw