ಟೆಂಪೋ ಕಾರಿನ ನಡುವೆ ಭೀಕರ ಅಪಘಾತ: ಸಜೀವ ದಹನವಾದ ಕಾರು ಚಾಲಕ
ಚಾಮರಾಜನಗರ: ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ.
ಮೈಸೂರಿನ ಮುಜಾಮಿಲ್ ಅಹಮದ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಕಿ ಹತ್ತಿಕೊಂಡ ಪರಿಣಾಮ ಟೆಂಪೋ ಮುಂಭಾಗವು ಸುಟ್ಟು ಕರಕಲಾಗಿದೆ.
ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw