ಮಹಾರಾಷ್ಟ್ರ ನೂತನ ಡಿಸಿಎಂ ಆಗಿ ಅಜಿತ್ ಪವಾರ್: ಅಚ್ಚರಿ ಮೂಡಿಸಿದ ಬೆಳವಣಿಗೆ - Mahanayaka
9:25 AM Saturday 21 - September 2024

ಮಹಾರಾಷ್ಟ್ರ ನೂತನ ಡಿಸಿಎಂ ಆಗಿ ಅಜಿತ್ ಪವಾರ್: ಅಚ್ಚರಿ ಮೂಡಿಸಿದ ಬೆಳವಣಿಗೆ

02/07/2023

ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ ಸಿಪಿಯ ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪವಾರ್ ಅವರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲಿದ್ದಾರೆ. 53 ಎನ್‌ ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ.

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಮುಂಜಾನೆ, ಎನ್‌ಸಿಪಿ ಶಾಸಕರ ಗುಂಪು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ನಡೆಸಿತು. ಅಲ್ಲಿ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಲೆ ಮತ್ತು ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಹಾಜರಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸಭೆಗೆ ಹಾಜರಾಗಿರಲಿಲ್ಲ.

ಈ ಮಧ್ಯೆ, ಮುಂಬೈನಲ್ಲಿ ನಡೆದ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಶರದ್ ಪವಾರ್ ಪುಣೆಯಲ್ಲಿ ಸುದ್ದಿಗಾರರಿಗೆ ಹೇಳಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ