ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ ಸಿನಿಮೀಯ ಶೈಲಿಯಲ್ಲಿ ದರೋಡೆ | 25 ಕೆ.ಜಿ. ಚಿನ್ನ ಹೊತ್ತೊಯ್ದ ದರೋಡೆಕೋರರು
ಬೆಂಗಳೂರು: ಹಾಡುಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆ.ಜಿ.ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ.
ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ 9:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಚೇರಿಗೆ ನುಗ್ಗಿದ್ದ ದರೋಡೆಕೋರರು ಮಾರಕಾಸ್ತ್ರಗಳಿಂದ ಕಚೇರಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ.
ಕಚೇರಿ ಸಿಬ್ಬಂದಿಯ ಕೈಕಾಲನ್ನು ಕಟ್ಟಿ ಹಾಕಿ ಬಳಿಕ ದರೋಡೆಕೋರರು ಚಿನ್ನ ದೋಚಿ ಪರಾರಿಯಾಗಿದ್ದಾರೆ. ಕೃತ್ಯ ನಡೆಸುವ ಸಂದರ್ಭದಲ್ಲಿ ದರೋಡೆಕೋರರು ಕಚೇರಿ ವ್ಯವಸ್ಥಾಪಕ ಶ್ರೀನಿವಾಸ್ ರಾಘವ್ ಮತ್ತು ಕೆಲ ಸಿಬ್ಬಂದಿ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬಾಗಲೂರು ಪೊಲೀಸರು ಪರಿಶೀಲನೆ ನಡೆದಿದ್ದಾರೆ. ದರೋಡೆಕೋರರು ದೋಷಚಿದ 25 ಕೆ.ಜಿ. ಚಿನ್ನದ ಬೆಲೆ 96 ಸಾವಿರ ರೂಪಾಯಿ ಎಂದು ತಿಳಿದು ಬಂದಿದೆ.
ಇನ್ನೂ ದರೋಡೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಚಿನ್ನ ದೋಚಿದ ಬಳಿಕ ಬೈಕ್ ನಲ್ಲಿ ದರೋಡೆಕೋರರು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ದರೋಡೆಕೋರರ ಪತ್ತೆಗಾಗಿ ಪೊಲೀಸರು ವಿವಿಧ ಸಿಸಿ ಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.