ದಕ್ಷಿಣ ಕನ್ನಡ: ಜುಲೈ 5ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ - Mahanayaka

ದಕ್ಷಿಣ ಕನ್ನಡ: ಜುಲೈ 5ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

rain
04/07/2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.

ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅನೇಕ ತುರ್ತು ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 5 ರ ಬುಧವಾರ ರಜೆಯನ್ನು ಘೋಷಿಸಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು‌. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕೆಂದು ಸೂಚಿಸಿದೆ.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.

ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬೇಕೆಂದು ಕೋರಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ