ಶಾಕಿಂಗ್: ಕೊಯಮತ್ತೂರು ಡಿಐಜಿ ಐಪಿಎಸ್ ಸಿ.ವಿಜಯಕುಮಾರ್ ಆತ್ಮಹತ್ಯೆ: ಕಾರಣ ನಿಗೂಢ - Mahanayaka
10:52 AM Saturday 21 - September 2024

ಶಾಕಿಂಗ್: ಕೊಯಮತ್ತೂರು ಡಿಐಜಿ ಐಪಿಎಸ್ ಸಿ.ವಿಜಯಕುಮಾರ್ ಆತ್ಮಹತ್ಯೆ: ಕಾರಣ ನಿಗೂಢ

07/07/2023

ಕೊಯಮತ್ತೂರು ವಲಯದ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (ಡಿಐಜಿ) ಶ್ರೇಣಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಅವರ ನಿಧನವು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಡಿಐಜಿ ಸಿ.ವಿಜಯಕುಮಾರ್ ಅವರು ನಗರದ ರೆಡ್ ಫೀಲ್ಡ್ ನಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಸೇವಾ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2009ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಇವರು ಈ ವರ್ಷದ ಜನವರಿಯಲ್ಲಿ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಇವರು ಈ ಹಿಂದೆ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಅವರು ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರು ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ತಮಿಳುನಾಡಿನಲ್ಲಿ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಎರಡನೇ ಘಟನೆ ಇದಾಗಿದೆ.


Provided by

ಇತ್ತೀಚಿಗೆ ತಿರುಚೆಂಗೋಡ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ವಿಷ್ಣುಪ್ರಿಯಾ 2015 ರಲ್ಲಿ ನಾಮಕ್ಕಲ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ವಿಜಯಕುಮಾರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ವಿಜಯಕುಮಾರ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲಾ ಎಸ್ಪಿ ಸೇರಿದಂತೆ ವಿವಿಧ ಜವಾಬ್ದಾರಿಗಳಲ್ಲಿ ತಮಿಳುನಾಡು ಪೊಲೀಸ್ ಪಡೆಗೆ ಉತ್ತಮವಾಗಿ ಸೇವೆ ಸಲ್ಲಿಸಿದ್ದರು.
‘ಇವರ ಸಾವು ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಪೊಲೀಸ್ ಪಡೆಗೆ ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿ ಇದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ