ಹಿಂಸಾತ್ಮಕವಾಗಿ ಗೋಸಾಗಾಟ: ಬಿಜೆಪಿ ಕಾರ್ಯಕರ್ತರೆನ್ನಲಾದ ನಾಲ್ವರ ಬಂಧನ - Mahanayaka
10:06 AM Saturday 21 - September 2024

ಹಿಂಸಾತ್ಮಕವಾಗಿ ಗೋಸಾಗಾಟ: ಬಿಜೆಪಿ ಕಾರ್ಯಕರ್ತರೆನ್ನಲಾದ ನಾಲ್ವರ ಬಂಧನ

manglore
13/07/2023

ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ–ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತರು.

ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ದಳ ಠಾಣಾ ಪೊಲೀಸರ ನೇತೃತ್ವದ ತಂಡ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು.


Provided by

ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ವಾಹನದಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ 65 ಸಾವಿರ ರೂಪಾಯಿ ಹಾಗೂ ವಾಹನಗಳ ಅಂದಾಜು ಮೌಲ್ಯ 7 ಲಕ್ಷ ರೂಪಾಯಿ ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 7.65 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ