ಜಮ್ಮುವಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಕ್ಷಣಾರ್ಧದಲ್ಲೇ ನಡೆಯಿತು ಅಟ್ಯಾಕ್ - Mahanayaka
12:51 AM Friday 20 - September 2024

ಜಮ್ಮುವಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಕ್ಷಣಾರ್ಧದಲ್ಲೇ ನಡೆಯಿತು ಅಟ್ಯಾಕ್

13/07/2023

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಗ್ರಾನ್ ಪ್ರದೇಶದಲ್ಲಿ ಗುರುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಮೂವರು ವಲಸೆ ಕಾರ್ಮಿಕರ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ.

ಈ ಘಟನೆಯಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಇದೊಂದು ಭಯೋತ್ಪಾದಕ ದಾಳಿಯಾಗಿದೆ. ಗಾಯಗೊಂಡ ಕಾರ್ಮಿಕರನ್ನು ಅನ್ವಾಲ್ ಥೋಕರ್, ಹೀರ್ಲಾಲ್ ಮತ್ತು ಪಾಂಟೂ ಎಂದು ಪೊಲೀಸರು ಗುರುತಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಶೋಪಿಯಾನ್​ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ದಾಳಿಕೋರರನ್ನು ವಶಪಡಿಸುವುದಕ್ಕಾಗಿ ಆ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ