ಮನೆಯ ಮೇಲೆ ಬಿದ್ದ ಪಿಕಪ್ ವಾಹನ: ಮನೆಯೊಳಗೆ ಸಿಲುಕಿಕೊಂಡ ಮನೆಯೊಡತಿ

14/07/2023
ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು ಮನೆಯೊಡತಿ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಯಲ್ತಡ್ಕ — ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.
ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು. ಇವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ.
ವಾಹನವನ್ನು ತೆರವು ಮಾಡದೇ ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯಿತು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw