ಇಸ್ರೋದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ - Mahanayaka
12:57 AM Friday 20 - September 2024

ಇಸ್ರೋದ ಐತಿಹಾಸಿಕ ಚಂದ್ರಯಾನ–3 ಉಡಾವಣೆ ಯಶಸ್ವಿ

chandrayan
14/07/2023

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಉಡಾವಣೆಗೊಂಡಿದೆ.

ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.


Provided by

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ