ಕೊರೊನಾ ಲಸಿಕೆ ವಿರುದ್ಧ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ!
26/01/2021
ನವದೆಹಲಿ: ಕೊರೊನಾ ಲಸಿಕೆ ವಿರುದ್ಧ ದೇಶದಲ್ಲಿ ನೀಡಲಾಗುತ್ತಿರುವ 2 ಲಸಿಕೆಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
ಸುಳ್ಳು ಸುದ್ದಿಗಳ ಹಿನ್ನೆಲೆಯಲ್ಲಿ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಿಂದೆ ಮುಂದೆ ನೋಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪತ್ರ ಬರದಿರುವ ಕೇಂದ್ರ ಗೃಹ ಸಚಿವಾಲಯ ಮುಖ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ಲಸಿಕೆ ಸಾಮರ್ಥ್ಯ ಹೊಂದಿವೆ ಎಂದು ಸ್ವತಃ ಔಷಧಗಳ ಕುರಿತ ರಾಷ್ಟ್ರೀಯ ನಿಯಂತ್ರಣಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಇದರ ಸುಳ್ಳುಸುದ್ದಿ ಹರಡಲಾಗುತ್ತಿದೆ ಎಂದು ಕಿಡಿಕಾರಿದೆ.