ಜಿ-20 ಶೃಂಗಸಭೆಗೆ ವೇದಿಕೆ ರೆಡಿ: ಕೂತೂಹಲ ಮೂಡಿಸಿದ ಸಭೆ: ಏನೇನ್ ಚರ್ಚೆ ನಡೆಯಬಹುದು..? - Mahanayaka

ಜಿ-20 ಶೃಂಗಸಭೆಗೆ ವೇದಿಕೆ ರೆಡಿ: ಕೂತೂಹಲ ಮೂಡಿಸಿದ ಸಭೆ: ಏನೇನ್ ಚರ್ಚೆ ನಡೆಯಬಹುದು..?

16/07/2023

ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಗಾಂಧಿನಗರಕ್ಕೆ ಭೇಟಿ ನೀಡಿದರು.

ಈ ಸಭೆ ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯುರೋಪಿಯನ್ ಕಮಿಷನ್ ಮತ್ತು ಏಷ್ಯನ್ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ (ಎಐಐವಿ) ಮತ್ತಿತರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಜೊತೆಗೆ ಹೂಡಿಕೆದಾರರ ದುಂಡು ಮೇಜನ ಸಭೆ, ತೆರಿಗೆ ವಿಚಾರ ಸಂಕಿರಣದಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.

ಜಾಗತಿಕ ಆರ್ಥಿಕತೆ ಮತ್ತು ಅಂತರರಾಷ್ಟ್ರೀಯ ಹಣಕಾಸು ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಜಂಟಿಯಾಗಿ ಮೂರನೇ ಜಿ-20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ವೀಕರಿಸಿದ ಆದೇಶದ ಆಧಾರದ ಮೇಲೆ ವಿವಿಧ ಕೆಲಸದ ಗುರಿ ಸಾಧಿಸಲು ಮೂರನೇ ಜಿ-20 ಮೂರನೇ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಕಳೆದ ವಾರ ಹೇಳಿಕೆ ನೀಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ